Posted on December 28, 2011 by ಅಬ್ದುಲ್ ಹಮೀದ್ ಸಿ.ಹೆಚ್, ಕಾವು, ಪುತ್ತೂರು.
ಬಂಟ್ವಾಳ : ಬಂಟ್ವಾಳ ನಗರ ಪಂಚಾಯತ್ ಮಾಜಿ ಉಪಾಧ್ಯಕ್ಷ, ಶಾಂತಿಅಂಗಡಿ ನಿವಾಸಿ ಎ.ಕೆ. ಅಬೂಸಾಲಿ (52) ಅವರು ಅಲ್ಪ ಕಾಲದ ಅನಾರೋಗ್ಯದಿಂದ ಮಂಗಳವಾರ ಮುಂಜಾನೆ ಸ್ವಗೃಹದಲ್ಲಿ ನಿಧನರಾದರು.
ಚಾಂದ್ ಇಲೆಕ್ಟ್ರಿಕಲ್ಸ್‌ನ ಗುತ್ತಿಗೆದಾರರಾಗಿದ್ದ ಇವರು ಶಾಂತಿಅಂಗಡಿ ಮುಸ್ಲಿಂ ಯಂಗ್‌ಮೆನ್ಸ್ ಎಸೋಸಿಯೇಶನ್ ಇದರ ಅಧ್ಯಕ್ಷರಾಗಿ, ಮಿತ್ತಬೈಲು ಜುಮಾ ಮಸೀದಿ ಉಪಾಧ್ಯಕ್ಷರಾಗಿ ಜಮೀಯ್ಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕದ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದು, ಅವರು ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಮನೆಗೆ ತೆರಳಿದ ಸಮಸ್ತ ಕೇಂದ್ರ ಮುಶಾವರ ಸದಸ್ಯರಾದ ಶೈಖುನಾ ಕೆ.ಪಿ. ಅಬ್ದುಲ್ ಜಬ್ಬಾರ್ ಮುಸ್ಲಿಯಾರ್ ಪ್ರಾರ್ಥನೆ ಸಲ್ಲಿಸಿದರು. ಬಂಟ್ವಾಳ ತಾಲೂಕು ಜಮೀಯ್ಯತುಲ್ ಫಲಾಹ್ ಹಾಗೂ ಮಿತ್ತಬೈಲು ಜುಮಾ ಮಸೀದಿ ಅಧ್ಯಕ್ಷ ಎಸ್.ಎಂ. ಮುಹಮ್ಮದ್ ಅಲಿ ಶಾಂತಿಅಂಗಡಿ ಇವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ.
- ಪಿ.ಎಂ.ಎ. ಪಾಣೆಮಂಗಳೂರು. (ವರದಿಗಾರರು, ವಿ ಕೆ ನ್ಯೂಸ್).
No comments:
Post a Comment